ಮಡಿಕೇರಿ, ಡಿ. 26: ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಿಂದ ನಗರಸಭೆ ವತಿಯಿಂದ ನಗರದ ರಾಣಿಪೇಟೆಯಲ್ಲಿ ನಿರ್ಮಾಣಗೊಂಡಿರುವ ನೂತನ ಅಂಗನವಾಡಿ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಉದ್ಘಾಟಿಸಿದರು.
ಈ ಸಂದರ್ಭ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರಾದ ತಜಸುಂ, ಪ್ರಕಾಶ್ ಆಚಾರ್ಯ, ಚುಮ್ಮಿ ದೇವಯ್ಯ, ಕಾಂಗ್ರೆಸ್ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾóಕ್, ಪ್ರಮುಖರಾದ ಎಂ.ಐ. ನಾಣಯ್ಯ, ಮುನೀರ್ ಮಾಚಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮುಮ್ತಾಜ್, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹಾಜರಿದ್ದರು.