ಗೋಣಿಕೊಪ್ಪ ವರದಿ, ಡಿ. 27: ಕಾಲ್ಸ್ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡೆಯನ್ನು ಸಾಂಸ್ಕøತಿಕ ಕಾರ್ಯಕ್ರಮ ರೂಪದಲ್ಲಿ ಅನಾವರಣಗೊಳಿಸಲಾಯಿತು.
ಪುಟ್ಟ ಮಕ್ಕಳು ವಿವಿಧ ವೇಷ ಧರಿಸಿ ಓಟ, ಕಪ್ಪೆ ಹಾರುವದು ಇಂತಹವುಗಳಲ್ಲಿ ಪಾಲ್ಗೊಂಡರು. ಪುಟ್ಟ ಮಕ್ಕಳು ಸ್ಕ್ವಿಡ್ ಹಾಗೂ ಸಾಂತಾ ಕ್ಲಾಸ್ ವೇಷ ಧರಿಸಿ ಗಮನ ಸೆಳೆದರು. ಯೋಗಾ ನೃತ್ಯದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿ ವಿಶೇಷತೆ ಮೂಡಿಸಿದರು. ವಿದ್ಯಾರ್ಥಿನಿಯರ ಜುóಂಬಾ ನೃತ್ಯ ಚಪ್ಪಾಳೆ ಗಿಟ್ಟಿಸಿತು.
ಅಥ್ಲೆಟಿಕ್ಸ್ ಏರೇನಾದ ತೆರೆದ ಸಭಾಂಗಣದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡು ಸಂಭ್ರಮಿಸಿದರು. ಎನ್ಎಸ್ಎಸ್ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ವಿದ್ಯಾರ್ಥಿ ನಾಯಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಂತರರಾಷ್ಟ್ರೀಯ ಟೆನ್ನಿಸ್ ತಾರೆ ರೋಹನ್ ಬೋಪಣ್ಣ ಕ್ರೀಡಾಜ್ಯೋತಿ ಬೆಳಗಿಸಿದರು. ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಪಾರಿತೋಷಕ ನೀಡಿ ಗೌರವಿಸಲಾಯಿತು.
ಅತಿಥಿಗಳಿಗೆ ನೆನಪಿನ ಕಾಣಿಕೆ ಯಾಗಿ ತೂಕ್ ಬೊಳಕ್ ನೀಡ ಲಾಯಿತು. ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಕಾಲ್ಸ್ ಶಾಲೆಯ ಮುಖ್ಯಸ್ಥ ದತ್ತಾ ಕರುಂಬಯ್ಯ, ಅಶ್ವಿನಿ ಸ್ಪೋಟ್ರ್ಸ್ ಫೌಂಡೇಶನ್ ನಿರ್ದೇಶಕಿ ಅಶ್ವಿನಿ ನಾಚಪ್ಪ, ಪ್ರಾಂಶುಪಾಲೆ ಗೌರಮ್ಮ ಉಪಸ್ಥಿತರಿದ್ದರು.