ನಾಪೆÇೀಕ್ಲು, ಡಿ. 24: ನಾಪೆÇೀಕ್ಲು ಪಟ್ಟಣ ನಿವಾಸಿ ಮೂಲತಃ ಕೊಳಕೇರಿ ಗ್ರಾಮದ ಬಿದ್ದಾಟಂಡ ಬೆಲ್ಲು ಬೆಳ್ಯಪ್ಪ (73) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದರು.
ಸಾಮಾಜ ಸೇವೆಯಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಬೆಳ್ಯಪ್ಪ ಲಯನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು, ನಾಪೆÇೀಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ಮತ್ತು ನಾಪೆÇೀಕ್ಲು ಕೊಡವ ಸಮಾಜದ ಆಡಳಿತ ಮಂಡಳಿ ನಿದೆರ್Éೀಶಕರಾಗಿ, ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ಟ್ರಸ್ಟಿಯಾಗಿ ಪ್ರಸ್ತುತ
(ಮೊದಲ ಪುಟದಿಂದ) ಸೇವೆ ಸಲ್ಲಿಸುತ್ತಿದ್ದರು. ಕಳೆದ ಬಾರಿ ನಾಪೆÇೀಕ್ಲುವಿನಲ್ಲಿ ನಡೆದ ಬಿದ್ದಾಟಂಡ ಕಪ್ ಹಾಕಿ ನಮ್ಮೆಯ ಮೈದಾನ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.
ಮೃತರ ಗೌರವಾರ್ಥ ನಾಪೆÇೀಕ್ಲು ಪಟ್ಟಣದಲ್ಲಿ ಮಧ್ಯಾಹ್ನ ಒಂದು ಗಂಟೆಗಳ ಕಾಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ಸೂಚಿಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರೂ ಆಗಿದ್ದ ಇವರ ನಿಧನಕ್ಕೆ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂ.ಪಿ. ಸುನಿಲ್ ಸುಬ್ರಮಣಿ, ಅಶ್ವಿನಿ ಆಸ್ಪತ್ರೆ ಅಧ್ಯಕ್ಷ ಬಿ.ಕೆ. ಕೃಷ್ಣ, ಗೌರವ ಕಾರ್ಯದರ್ಶಿ ಜಿ. ರಾಜೇಂದ್ರ, ಟ್ರಸ್ಟಿಗಳಾದ ದೇವಿ ಪೂಣಚ್ಚ, ಚಕ್ಕೇರ ಮನು ಕಾವೇರಪ್ಪ, ಡಾ. ಪಿ.ಎನ್. ಕುಲಕರ್ಣಿ ಅವರುಗಳು ಬೆಳ್ಯಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.