ಸೋಮವಾರಪೇಟೆ, ಡಿ. 27: ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಸ್ತು, ಶ್ರದ್ಧೆ, ಗುರಿ ಹಾಗೂ ಸಂಯಮ ಮೈಗೂಢಿಸಿಕೊಂಡರೆ ಸಾಧನೆಯ ಮೆಟ್ಟಿಲೇರಬಹುದು.

ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವದು ಶಿಕ್ಷಕರ ಕರ್ತವ್ಯ ಎಂದರು. ಮೈಸೂರು ಧರ್ಮಕ್ಷೇತ್ರದ ಧರ್ಮ ಗುರುಗಳಾದ ಎನ್.ಎಸ್. ಮರಿ ಜೋಸೆಫ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೆ ಮಾನಸಿಕ, ದೈಹಿಕ ಹಾಗೂ ನೈತಿಕ ಶಿಕ್ಷಣ ಸಿಗಬೇಕು. ಮಾನವೀಯ ಮೌಲ್ಯಗಳನ್ನು ಬೋಧಿಸುವ ಶಿಕ್ಷಣದ ಅಗತ್ಯವಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಚಾಂದಿನಿ, ವರ್ಧನ್, ಅನೀಶ್, ಪ್ಲೇವಿಯಾ ಅನೂಷ, ರಶ್ಮಿ, ಅನಿರುದ್ ರಾಮ್, ಶ್ರೀಹರಿ, ಪ್ರಾಂತ್ಯ, ಸಂದ್ಯಾ ಅವರನ್ನು ಗೌರವಿಸಲಾಯಿತು. ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗೆ ಭಾಜನರಾದ ಶ್ರಾವಣಿ, ದೇಹದಾದ್ರ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತ ರತನ್ ಕೆ.ಎಂ., ನಿವೃತ್ತ ಶಿಕ್ಷಕರಾದ ಮಿಲ್ಗ್ರೇಡ್ ಗೋನ್ಸಾಲ್‍ವೆಸ್, ದೈಹಿಕ ಶಿಕ್ಷಣ ಶಿಕ್ಷಕ ಜೈರಾಮ್, ಚಂದ್ರಹಾಸ ಭಟ್, ಜನಾರ್ಧನ್ ಅವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ಜಲಾಲಿಯ ಮಸೀದಿ ಅಧ್ಯಕ್ಷ ಕೆ.ಎಂ. ಆದಂ, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಬಿ. ಸತೀಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ. ವನಜಾ, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ, ಕೊಡಗು ವಲಯ ಧರ್ಮಾಧಿಕಾರಿ ಮದುಲೈ ಮುತ್ತು ಸಂತ ಜೋಸೆಫರ ಶಾಲೆಯ ವ್ಯವಸ್ಥಾಪಕ ರಾಯಪ್ಪ, ಪ್ರಾಂಶುಪಾಲ ಟೆನ್ನಿ ಕುರಿಯನ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಓಎಲ್‍ವಿ ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ಮಮತ, ಪ್ರಮುಖರಾದ ಶೀಲಾ ಡಿಸೋಜ, ದೇವಿಪ್ರಸಾದ್, ಲೋಲಾಕ್ಷಿ, ಯೋಗೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.