ಹೊದ್ದೂರು, ಡಿ. 26: ಗೋಣಿಕೊಪ್ಪಲುವಿನ ಕೃಷಿ ವಿಜ್ಞಾನ ಕೇಂದ್ರ ಮತ್ತು ಮಡಿಕೇರಿಯ ಸಂಬಾರ ಮಂಡಳಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ. 10 ರಂದು ಕಾಳುಮೆಣಸು ಮತ್ತು ಏಲಕ್ಕಿ ಬೆಳಗಳ ಇತ್ತೀಚಿಗಿನ ಬೆಳವಣಿಗೆಗಳ ಕುರಿತ ಒಂದು ದಿನದ ಉಚಿತ ಕಾರ್ಯಾಗಾರವನ್ನು ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ಜ. 8 ರೊಳಗೆ ದೂರವಾಣಿ ಮೂಲಕ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ. ದೂರವಾಣಿ ಸಂಖ್ಯೆ: 08274-247274.