ಸಿದ್ದಾಪುರ, ಡಿ. 27: ಸಿದ್ದಾಪುರ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಯಿತು.
ಈ ಸಂದರ್ಭ ಗ್ರಾಮಸ್ಥ ಮೂಸಾ ಮಾತನಾಡಿ, ಸಿದ್ದಾಪುರ ಪಟ್ಟಣದ ವ್ಯಾಪ್ತಿಯಲ್ಲಿ ಕೆಲವರು ಅನುಮತಿ ಪಡೆಯದೆ ಅನಧಿಕೃತವಾಗಿ ಧ್ವಜಗಳನ್ನು ಅಳವಡಿಸಿದ್ದು ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿದರು. ಸಭೆಯಲ್ಲಿ ಪಿ.ಡಿ.ಓ. ವಿಶ್ವನಾಥ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.