ನಾಪೆÉÇೀಕ್ಲು, ಡಿ. 27: ಕೊಡಗು ಕ್ರೀಡೆಯ ತವರೂರು. ಕೊಡಗಿನಲ್ಲಿ ಗ್ರಾಮೀಣ ಕ್ರೀಡೆಯನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಸರಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಅಲಿ ಅಭಿಪ್ರಾಯಪಟ್ಟರು. ಮೂರ್ನಾಡು ಗೌತಮ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಹಾಕಿ ಮತ್ತು ಕ್ರಿಕೆಟ್ ಆಟಕ್ಕೆ ಅನುದಾನ ನೀಡುತ್ತಿದೆ. ಅದರಂತೆ ಗ್ರಾಮೀಣ ಪ್ರದೇಶದ ವಾಲಿಬಾಲ್, ಕಬಡ್ಡಿ ಮೊದಲಾದ ಕ್ರೀಡೆಗೂ ಅನುದಾನ ನೀಡಬೇಕೆಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮೂರ್ನಾಡು ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಪಳಂಗಂಡ ಅಪ್ಪಣ್ಣ, ಗುತ್ತಿಗೆದಾರ ಮಜೀದ್, ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ. ರಷೀದ್, ಜಿಲ್ಲಾ ಯುವ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಜಾಶೀರ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಕಾಂಗ್ರೆಸ್ ಮುಖಂಡ ಅಂದಾಯಿ, ಜೆಡಿಎಸ್ ಮುಖಂಡ ಎಂ.ಎಂ. ಅಬೂಬಕರ್ ಇದ್ದರು.