ಮಡಿಕೇರಿ, ಡಿ.28 : ದೇಶದ ಸಂವಿಧಾನವನ್ನು ಬದಲಾಯಿಸುವ ಕುರಿತು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ವರ್ತನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ವಿ.ಕೆ.ಸತೀಶ್ ಕುಮಾರ್ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಸಚಿವ ಅನಂತಕುಮಾರ್ ಹೆಗಡೆ ಅವರ ಹೇಳಿಕೆಯನ್ನು ಖಂಡಿಸಿ ತಾ.29 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವದೆಂದು ತಿಳಿಸಿದ್ದಾರೆ.