ಮಡಿಕೇರಿ, ಡಿ. 28: ಪೊನ್ನಂಪೇಟೆ ಎಂ.ಸಿ.ಎಸ್. ಪ್ರೌಢಶಾಲಾ ವಾರ್ಷಿಕೋತ್ಸವವು ತಾ. 30 ರಂದು ನಡೆಯಲಿದೆ. ಅಂದು ಮಧ್ಯಾಹ್ನ 10 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆಯನ್ನು ಚನ್ನಪಂಡ ಕೆ. ಸುಬ್ಬಯ್ಯ ಮಾಡಲಿದ್ದಾರೆ. ಸಭಾ ಕಾರ್ಯಕ್ರಮ ಅಪರಾಹ್ನ 2 ಗಂಟೆಗೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.