ಸೋಮವಾರಪೇಟೆ,ಡಿ.28: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ತಾ. 30ರಂದು (ನಾಳೆ) ನಡೆಯಲಿದೆ ಎಂದು ಪ್ರಾಂಶುಪಾಲ ಎಚ್.ಬಿ. ತಳವಾರ್ ತಿಳಿಸಿದ್ದಾರೆ.
ಮಧ್ಯಾಹ್ನ 2ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜು ಅಭಿವದ್ಧಿ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯೆ ತಂಗಮ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೇಖರ್, ಉಪನಿರ್ದೇಶಕ ಆರ್. ಮೋಹನ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಭಾಗವಹಿಸಲಿದ್ದಾರೆ.