ಮಡಿಕೇರಿ, ಡಿ. 28: ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿ ಸುವಂತೆ ಜಿ.ಪಂ. ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಪ್ರಬಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿ.ಪಂ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಸತಿ ಯೋಜನೆಗಳ ಪ್ರಗತಿ ಸಂಬಂಧ 15 ದಿನಗಳಿಗೊಮ್ಮೆ ಪಿಡಿಓಗಳ ಸಭೆ ಕರೆದು ಶೀಘ್ರ ಪ್ರಗತಿ ಸಾಧಿಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ತಾಲೂಕುವಾರು ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಮಡಿಕೇರಿ, ಡಿ. 28: ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿ ಸುವಂತೆ ಜಿ.ಪಂ. ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಪ್ರಬಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿ.ಪಂ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಸತಿ ಯೋಜನೆಗಳ ಪ್ರಗತಿ ಸಂಬಂಧ 15 ದಿನಗಳಿಗೊಮ್ಮೆ ಪಿಡಿಓಗಳ ಸಭೆ ಕರೆದು ಶೀಘ್ರ ಪ್ರಗತಿ ಸಾಧಿಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ತಾಲೂಕುವಾರು ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಿಂದ ನೂತನ ಅಂಗನವಾಡಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು, ತುರ್ತಾಗಿ ಕಾಮಗಾರಿ ಗಳನ್ನು ಪೂರ್ಣಗೊಳಿಸಿ ಅಂಗನ ವಾಡಿ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನರೇಗ ಯೋಜನೆಯಲ್ಲಿ ಬರುವಂತಹ ಕಾರ್ಯಕ್ರಮಗಳ ಅನುಷ್ಠಾನ ತೀವ್ರಗತಿಯಲ್ಲಿ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳಿಗೆ ಫಲಶೃತಿ ತಲಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿ ಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಿ ಮಾನವ ಸಂಪನ್ಮೂಲ ಗಳನ್ನು ಬಳಸಿ ಲೋಕೋಪಯೋಗಿ ಇಲಾಖೆಯಡಿ ಬರುವ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಜಿ.ಪಂ. ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಸಾಮಾಜಿಕ ಅರಣ್ಯೀಕರಣ ಯೋಜನೆಯ ಮಾಹಿತಿಯನ್ನು ಅರಣ್ಯಾಧಿಕಾರಿ ನೆಹರು ಅವರಿಂದ ಪಡೆದು ಜಿಲ್ಲೆಯಲ್ಲಿ ಇದುವರೆಗೂ 35 ಸಾವಿರ ಸಸಿಗಳನ್ನು ರೈತರಿಗೆ ವಿತರಣೆ ಮಾಡಿರುವದಾಗಿ ಅರಣ್ಯಾಧಿಕಾರಿ ಸಭೆಗೆ ಮಾಹಿತಿ ನೀಡಿದರು.
ನರೇಗ ಯೋಜನೆಯಡಿ ಬರು ವಂತಹ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಪಿ.ಐ. ಶ್ರೀವಿದ್ಯಾ ಸೂಚನೆ ನೀಡಿದರು.
ಸಭೆಯಲ್ಲಿ ಎಲ್ಲಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಮಾಹಿತಿ ಪಡೆದು ಬಾಕಿ ಇರುವ ಕಾರ್ಯಕ್ರಮ ಗಳನ್ನು ತುರ್ತಾಗಿ ಫಲಾನು ಭವಿಗಳನ್ನು ಗುರುತಿಸಿ ಸರ್ಕಾರದ ಸವಲತ್ತುಗಳನ್ನು ಅರ್ಹರಿಗೆ ತಲಪಿಸಲು ಅಧಿಕಾರಿಗಳು ಕಾರ್ಯ ಪ್ರ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ, ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.