ಮಡಿಕೇರಿ, ಡಿ. 29: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರೋಲ್ ಆಫ್ ಸ್ಟಾಟಿಸ್ಟಿಕ್ಸ್ ಇನ್ ಸೈಂಟಿಫೀಕ್ ರಿಸರ್ಚ್ ಎಂಬ ವಿಷಯದ ಮೇಲೆ ತಾ. 4 ಮತ್ತು 5 ರಂದು ಎರಡು ದಿನಗಳ ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರದಲ್ಲಿ ಪ್ರತಿನಿಧಿ ಗಳಾಗಿ ರಾಜ್ಯಾದ್ಯಂತ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಕಾರ್ಯಾಗಾರಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುವದು.

ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ನೋಂದಾಯಿಸಿ ಕೊಳ್ಳಲು ತಾ. 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ (hಣಣಠಿ://ತಿತಿತಿ.ಞsಣಚಿಛಿಚಿಜemಥಿ.iಟಿ) ಅನ್ನು ಸಂಪರ್ಕಿಸಬಹುದು.