ಸುಂಟಿಕೊಪ್ಪ, ಡಿ. 29: ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಮೂರ್ನಾಡಿನ ಎಂ.ಎಂ. ಸುಹೆಲ್ ಅವರನ್ನು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್‍ಖಾನ್ ಅವರು ನೇಮಿಸಿದ್ದಾರೆ.

ಸೋಮವಾರಪೇಟೆ: ಸೋಮವಾರಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ಗೌಡಳ್ಳಿಯ ಹೆಚ್.ಡಿ. ಪ್ರವೀಣ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಕ್ಷದ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ ಈ ಆಯ್ಕೆ ಮಾಡಿದ್ದು, ಇಲ್ಲಿನ ಪಕ್ಷದ ಕಚೇರಿಯಲ್ಲಿ ಕ್ಷೇತ್ರ ಅಧ್ಯಕ್ಷ ಸುರೇಶ್ ಅವರು ಆದೇಶ ಪತ್ರ ನೀಡಿದರು.