ನಾಪೆÇೀಕ್ಲು, ಡಿ. 29: ಸ್ಥಳೀಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಬಾರ ಪ್ರಾಚಾರ್ಯರಾಗಿ ಇತ್ತೀಚೆಗೆ ನಿವೃತ್ತಿ ಹೊಂದಿರುವ ಬಿ.ಎಂ. ಪದ್ಮಜಾ ಅವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಲಭಿಸಿದೆ.ಚಿಕ್ಕಮಗಳೂರು ಜಿಲ್ಲೆಯ ಬೀರೂರು ಶ್ರೀ ತರಳಬಾಳು ಜಗದ್ಗುರು ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಣ ಜ್ಞಾನ ಮಾಸ ಪತ್ರಿಕೆಯ 15 ನೇ ವಾರ್ಷಿಕೋತ್ಸವ ಸಮಾರಂಭ ದಲ್ಲಿ ಉಪನ್ಯಾಸಕ ಸೇವೆಯಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.