ಕುಶಾಲನಗರ, ಡಿ. 29: ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯ ಬಗ್ಗೆ ಕಾಲ ಕಾಲಕ್ಕೆ ಪರಿಶೀಲನೆ ನಡೆಸುವದು ಅಗತ್ಯವಾಗಿದೆ ಎಂದು ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್ ಕಿವಿಮಾತು ಹೇಳಿದರು.

ಶಾಲೆಯ ಸಭಾಂಗಣದಲ್ಲಿ ನಡೆದ ಹೋಬಳಿ ಮಟ್ಟದ ಶಾಲಾಭಿವೃದ್ಧಿ ಸಮಿತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸಿ ಅನವಶ್ಯಕ ದುಂದುವೆಚ್ಚ ಮಾಡುವ ಬದಲು ಉತ್ತಮ ಸೌಲಭ್ಯಗಳನ್ನು ಹೊಂದಿರುವ ಸರಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕಿದೆ ಎಂದು ಮನವಿ ಮಾಡಿದರÀು.

ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್, ಸಿ.ಆರ್. ನಿರ್ಮಲ, ಶಿಕ್ಷಕರಾದ ಲೋಕೇಶ್, ಹೆಚ್.ಟಿ. ನಾಗರಾಜು ಮತ್ತಿತರರು ಇದ್ದರು.