ಒಡೆಯನಪುರ, ಡಿ. 29: ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹುಲುಕೋಡು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಬನದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರಮದಾನದಲ್ಲಿ ಪಾಲ್ಗೊಂಡ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜಾತ್ರಾ ಬನದಲ್ಲಿ ಬೆಳೆದ ಗಿಡಗಂಟಿ, ಕಾಡು ಪೊದೆಗಳನ್ನು ಕಡಿದು ಸ್ವಚ್ಛಗೊಳಿಸಿದರು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯ ತನಕ ಶ್ರಮದಾನದ ಮೂಲಕ ಗ್ರಾಮವನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಮಾದರಿಯಾದರು. ಘಟಕದ ಯೋಜನಾಧಿಕಾರಿ ಹೆಚ್.ಎಂ. ವಿವೇಕ್ ನೇತೃತ್ವದಲ್ಲಿ ಕಾರ್ಯ ನಡೆಯಿತು.