ಕೂಡಿಗೆ, ಡಿ. 29: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಾಲ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘದ ಸದಸ್ಯರುಗಳಿಗೆ ಆರೋಗ್ಯ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಕುಟುಂಬ ಕಲ್ಯಾಣ ಸೇವೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ನೆರವೇರಿಸಿ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಅನೇಕ ಸೌಲಭ್ಯಗಳು ಇವೆ. ಇವುಗಳ ಬಗ್ಗೆ ಮಹಿಳೆಯರು ತಿಳಿದುಕೊಂಡರೆ ಇತರ ಗ್ರಾಮಸ್ಥರಿಗೆ ತಿಳಿಸಲು ಅನುಕೂಲವಾಗುವದು. ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಕುಶಾಲನಗರ ಕೇಂದ್ರ ಸ್ಥಾನದ ಬಿ.ಹೆ.ಇ. ಶಾಂತಿ ಇಲಾಖೆಯ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಿರಿಯ ಅರಣ್ಯ ಸಹಾಯಕ ಕುಮಾರ್ ಸೇರಿದಂತೆ ಇಲಾಖೆ ಸಿಬ್ಬಂದಿ ಮತ್ತು ಗುಂಪಿನ ಸದಸ್ಯರು ಹಾಜರಿದ್ದರು.