ವೀರಾಜಪೇಟೆ, ಡಿ. 29: ಸಮಾಜದಲ್ಲಿ ಅಪರಾಧಗಳು ನಡೆಯುತ್ತಿರುವ ರೀತಿ ಮತ್ತು ಅಪರಾಧ ತಡೆಯಲು ನಾವುಗಳು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಪೊಲೀಸರಿಂದ ಒಂದು ದಿನದ ಕಾರ್ಯಾಗಾರ ನಡೆಯಿತು.
ಪೊಲೀಸ್ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವೀರಾಜಪೇಟೆ ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತ ಅಶ್ರಯದಲ್ಲಿ ಕಾಲೇಜಿನ ಆವರಣದಲ್ಲಿರುವ ಸಭಾಂಗಣದಲ್ಲಿ ಅಪರಾಧ ತಡೆ ಮಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ವೃತ್ತ ನಿರೀಕ್ಷಕ ಕುಮಾರ್ ಅರಾಧ್ಯ ಮಾತನಾಡಿ, ಸುಭಿಕ್ಷ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಮಿತ್ರರು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ಎನ್.ಕೆ. ಜ್ಯೋತಿ ಮಾತನಾಡಿ, ಯುವಜನತೆ ಹೆಚ್ಚಾಗಿ ಮಾದಕ ವಸ್ತುಗಳ ವ್ಯಾಮೋಹಕ್ಕೆ ಒಳಗಾಗುತ್ತಿರುವ ಬಗ್ಗೆ ವಿಷಾದ ವ್ಯೆಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸಿ.ಜೆ. ಬಿನಾ, ಎನ್.ಎಸ್.ಎಸ್. ಯೋಜನಾಧಿಕಾರಿ ದಿನೇಶ್, ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸತೀಶ್ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.