ಮಡಿಕೇರಿ, ಡಿ.29 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್, ವಕ್ಫ್ ಇಲಾಖೆಗಳ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಜನವರಿ 1 ಮತ್ತು 2 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಮಾನ್ಯ ಕಾರ್ಯದರ್ಶಿ ಅವರು ಜನವರಿ, 01 ರಂದು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ, ಕಚೇರಿಗಳು ಮತ್ತು ವಕ್ಫ್ ಆಸ್ತಿಗೆ ಭೇಟಿ ನೀಡಲಿದ್ದಾರೆ.

ಜನವರಿ 2 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.