ಗೋಣಿಕೊಪ್ಪ ವರದಿ, ಡಿ. 29: ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಬಾರು ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 10 ರಂದು ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ಉಚಿತ ಕಾರ್ಯಾಗಾರವನ್ನು ಆಯೋಜಿಸ ಲಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲು 50 ರೈತರಿಗೆ ಮಾತ್ರ ಅವಕಾಶವಿದೆ. ಆಸಕ್ತ ರೈತರು ದೂರವಾಣಿ ಮೂಲಕ ಜನವರಿ 8 ರೊಳಗೆ ಹೆಸರನ್ನು ನೋಂದಾಯಿ ಸುವಂತೆ ಕೆವಿಕೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು 08274 247274 ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.