ಮಡಿಕೇರಿ, ಡಿ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ಜನವರಿ 9 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 11.15 ಗಂಟೆಗೆ ಗಾಲ್ಫ್ ಮೈದಾನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವದು ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣೆ ಹಾಗೂ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಮಿರ್ಜಾ ಮೆಹ್ದಿ ತಿಳಿಸಿದ್ದಾರೆ.