ವೀರಾಜಪೇಟೆ, ಡಿ. 30: ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಬೃಹತ್ ಗುಂಡಿಗಳು ಬಿದ್ದಿರುವದರಿಂದ ವಾಹನಗಳ ಸಂಚಾರವು ಮತ್ತು ನಡೆದಾಡಲು ದುಸ್ತರವಾಗಿತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿ ರಸ್ತೆ ಕಾಮಾಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಭೂಮಿಪೂಜೆ ನೆರವೇರಿಸಿದರು.
ವೀರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಅಂಬಟ್ಟಿ ಗ್ರಾಮದ ರಸ್ತೆಗೆ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದ ನಿಧಿಯಿಂದ 50 ಕೊಟಿ ರೂಪಾಯಿಗಳು ಬಿಡುಗಡೆ ಗೊಂಡಿದ್ದು ಬಿಟ್ಟಂಗಾಲ ಪಂಚಾಯಿತಿ ವ್ಯಾಪ್ತಿಯಲ್ಲಿ 84 ಲಕ್ಷ ರೂಪಾಯಿಗಳು ಬಿಡುಗಡೆಯಾಗಿರುತ್ತದೆ. ಗ್ರಾಮದ ಶ್ರೇಯೋಭಿವೃದ್ದಿಗೆ ಹಂತ ಹಂತವಾಗಿ ಕಾಮಾಗಾರಿಗಳು ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳತ್ತದೆ ಎಂದು ಹೇಳಿದರು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲಾಂ ಮಾತನಾಡಿ ಅಂಬಟ್ಟಿ ಗ್ರಾಮದಲ್ಲಿ ಹಲವಾರು ಸಮಸ್ಯೆಗಳು ಎದುರಿಸುತ್ತಿದ್ದು, ಗ್ರಾಮಸ್ಥರ ಮನವಿಯಂತೆ ಇಂದು ಸಚಿವರ ಆಪ್ತ ಕಾರ್ಯದರ್ಶಿಗಳು ಕಾಮಗಾರಿಗಳಿಗೆ ಪೂಜೆ ಮಾಡಿರುತ್ತಾರೆ ಎಂದು ತಿಳಿಸಿದರು.
ಈ ವೇಳೆ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಸದಸ್ಯರಾದ ಬಿ.ಅರ್, ದಿನೇಶ್. ಮಾಮುಣಿ ಅಲಿ ಕೆ. ನಾಯಡ ಬೊಪಣ್ಣ,ಯುಸೇಫ್ ಕೆ.ಎ. ಸಾದಲಿಕೆ. ಮತ್ತು ಗ್ರಾಮಸ್ಥರು ಹಾಜರಿದ್ದರು.