ಕೂಡಿಗೆ, ಡಿ. 30: ದೈನಂದಿನ ಬದುಕಿಗೆ ಕ್ಯಾಲೆಂಡರ್ ಸಹಕಾರಿ, ಸಮಯೋಚಿತ ಜೀವನ ಸಾಗಿಸಿದ್ದವರು ಕುವೆಂಪು, ತನ್ನ ಜೀವನದಲ್ಲಿ ಸಮಯವೇ ಇಲ್ಲವೆಂದು ಎಂದೂ ಕೊರÀಗಿದವರಲ್ಲ, ಸಾಹಿತ್ಯ ರಚನೆಗಾಗಿ ಎಂದೂ ಕೆಲಸಕ್ಕೆ ರಜೆ ಹಾಕಿದವರಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು.

ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪದವಿ ಪೂರ್ವ ಉಪಸ್ಯಾಸಕರ ಸಂಘ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಹಾಗೂ 2018ರ ಕ್ಯಾಲೆಂಡರ್ ಮಾಡಿ ಮಾತನಾಡಿದರು.

ಜಿಲ್ಲಾ ಪದವಿಪೂರ್ವ ಉಪನ್ಯಾಸಕರ ಸಂಘದ ಸಂಘಟನಾ ಕಾರ್ಯದರ್ಶಿ ಹಂಡ್ರಂಗಿ ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘ ಸ್ಥಾಪನೆಗೊಂಡಾಗಿನಿಂದ ಜಿಲ್ಲೆಯಲ್ಲಿ ಪ್ರತೀ ವರ್ಷ ಕಾಲೇಜುವಾರು ಪ್ರಾಯೋಜಕತ್ವದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದೇವೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಎನ್ ವಿಶ್ವನಾಥ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಕೆಂಚಪ್ಪ, ಪ್ರಧಾನ ಕಾರ್ಯದರ್ಶಿ ಫಿಲಿಪ್ ವಾಸ್, ಗೌರವಾಧ್ಯಕ್ಷ ಅಶ್ವಿನ್ ಕುಮಾರ್, ಸದಸ್ಯರಾದ ರಮೇಶ್ ಕುಮಾರ್,ರುದ್ರಪ್ಪ, ಕೂಡಿಗೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಹಾಲಿಂಗಯ್ಯ, ಕಾವೇರಿ ನದಿ ಜಾಗೃತಿ ಆಂದೋಲನದ ಸಂಚಾಲಕ ಚಂದ್ರಮೋಹನ್, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು. ಉಪನ್ಯಾಸಕ ರಾಯಪ್ಪ ಕಾರ್ಯಕ್ರಮ ನಿರೂಪಿಸಿದರು.