ಮಡಿಕೇರಿ, ಡಿ. 30: ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ಕರ್ನಾಟಕ ಜಾನಪದ ಅಕಾಡೆಮಿಯ ವಿಚಾರ ಸಂಕಿರಣ, ಜಾನಪದ ಗಾಯನ, ರಾಜ್ಯಮಟ್ಟದ ಜಾನಪದ ಸಂಭ್ರಮ ಮತ್ತು ವಾರ್ಷಿಕ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೊಡಗು ಜಿಲ್ಲೆಯಿಂದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾದ ಜಾನಪದ ಕಲಾವಿದರಾದ ರಾಣಿ ಮಾಚಯ್ಯ ಹಾಗೂ ಅಕಾಡೆಮಿಯ ಸದಸ್ಯೆ ವೀರಾಜಪೇಟೆ ತಾಲೂಕಿನ ತೋರ ಗ್ರಾಮದ ಕೆ.ಜೆ. ಮೋಹಿನಿ ಅವರವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಪ್ರಶಸ್ತಿ ನೀಡಿ ಗೌರವಿಸಿದರು.