ಮಡಿಕೇರಿ, ಡಿ. 30: ಕಾರುಗುಂದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವರ್ಷಗಳ ಹಿಂದೆ ನಿರ್ಮಿಸಿರುವ ಬಯಲು ರಂಗಮಂದಿರ ಅಪೂರ್ಣಗೊಂಡಿದ್ದು, ಸಂಬಂಧಪಟ್ಟವರು ಕಾಮಗಾರಿ ಪೂರ್ಣಗೊಳಿಸಲುವಂತೆ ಸಾರ್ವಜನಿಕ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ನಾಟೋಳಂಡ ಚರ್ಮಣ್ಣ ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಪೂರ್ಣ ಕಾಮಗಾರಿಯಿಂದ ವಿದ್ಯಾರ್ಥಿಗಳ ಸಹಿತ ಯಾವದೇ ಕಾರ್ಯಕ್ರಮ ಆಯೋಜಿಸಲು ಸಮಸ್ಯೆಯಾಗಿದೆ ಎಂದು ಗಮನ ಸೆಳೆದಿದ್ದಾರೆ.