ಮಡಿಕೇರಿ, ಡಿ. 30: ಗ್ರಾಹಕರಿಗೆ ಆಯೋಗವು ಹಲವಾರು ಹಕ್ಕುಗಳನ್ನು ನೀಡಿದೆ ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವದು ಪ್ರತಿಯೊಬ್ಬರ ಕರ್ತವ್ಯ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ ತಿಳಿಸಿದರು. ಜಿಲ್ಲಾಡಳಿತ, ಜಿಲಾ ್ಲಪಂಚಾಯಿತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ-ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇ ಗೌಡ ಮಾತನಾಡಿ, ಗ್ರಾಹಕರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವದು ಬಹಳ ಮುಖ್ಯ ಎಂದು ತಿಳಿಸಿದರು.

ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಕೆ.ಡಿ. ಪಾರ್ವತಿ , ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯೆ ಎಂ.ಎಸ್. ಲತಾ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷ ಎ.ಎ. ಚಂಗಪ್ಪ ಮಾತನಾಡಿದರು. ಗ್ರಾಹಕ ಇಲಾಖೆಯ ಸಿಬ್ಬಂದಿಗಳು ಮತ್ತು ಇತರರು ಇದ್ದರು.