ಕುಶಾಲನಗರ, ಡಿ. 30: ವೈಕುಂಠ ಏಕಾದಶಿ ಅಂಗವಾಗಿ ಇಲ್ಲಿನ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಪೂಜೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಿಗ್ಗೆ 8 ಗಂಟೆಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಲಡ್ಡು ಪ್ರಸಾದ ವಿತರಣೆ ನಡೆಯಿತು. ಸುಬ್ಬುರಾಂ ದೀಕ್ಷಿತ್ ಹಾಗೂ ಮಂಜುನಾಥ್ ಗುಪ್ತ ಪೂಜಾ ವಿಧಿ ನೆರವೇರಿಸಿದರು. ಈ ಸಂದರ್ಭ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಪ್ರಮುಖರಾದ ಬಿ.ಆರ್. ನಾಗೇಂದ್ರಪ್ರಸಾದ್, ವಿ.ಪಿ. ನಾಗೇಶ್, ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್. ವಸಂತ ಕುಮಾರ್ ಮತ್ತಿತರರು ಇದ್ದರು.