ನಾಪೋಕ್ಲು, ಡಿ. 31: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಶಸ್ತಿ ಗಳಿಸಿದ್ದಾರೆ. ಮಂಡ್ಯದ ಪ್ರಗತಿಪರ ಸೇವಾ ಸಂಸ್ಥೆಯು ನಡೆಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಂiÀiಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿ ಕೆ.ಜಿ. ತಂಗಮ್ಮ ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಹಾಗೂ ಆರನೇ ತರಗತಿಯ ವಿದ್ಯಾರ್ಥಿ ರೆಹನ್ ಕಾಳಯ್ಯ 7ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಎರಡನೇ ತರಗತಿ ವಿದ್ಯಾರ್ಥಿ ನೌಮನ್ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ ಐದನೇ ತರಗತಿ ವಿದ್ಯಾರ್ಥಿ ಮಹಮದ್ ಉನೈಸ್ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ನಾಲ್ಕನೇ ತರಗತಿ ವಿದ್ಯಾರ್ಥಿನಿ ಕೆ.ಜಿ. ಮುತ್ತಮ್ಮ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.