ಕುಶಾಲನಗರ, ಡಿ. 31: ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಕಿರುತೆರೆ ನಿರ್ಮಾಪಕ ಉಮಾಶಂಕರ್ ಹೇಳಿದರು. ಕುಶಾಲನಗರದಲ್ಲಿ ಎಸ್ಎಂಎಸ್ ಮೀಡಿಯಾ ಫ್ರೆಂಡ್ಸ್ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯನಿರತ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ದೈನಂದಿನ ಜಂಜಾಟದ ನಡುವೆ ಪತ್ರಕರ್ತರು ಕೆಲಸ ನಿರ್ವಹಿಸುತ್ತಿದ್ದು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕ್ರೀಡೆ ಉತ್ತಮ ಬಾಂಧವ್ಯ ಹೊಂದಲು ಅವಕಾಶ ಕಲ್ಪಿಸುತ್ತದೆ ಎಂದರಲ್ಲದೆ ಸ್ಪರ್ಧೆಯಲ್ಲಿ ಕುಶಾಲನಗರ, ಡಿ. 31: ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಕಿರುತೆರೆ ನಿರ್ಮಾಪಕ ಉಮಾಶಂಕರ್ ಹೇಳಿದರು. ಕುಶಾಲನಗರದಲ್ಲಿ ಎಸ್ಎಂಎಸ್ ಮೀಡಿಯಾ ಫ್ರೆಂಡ್ಸ್ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯನಿರತ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ದೈನಂದಿನ ಜಂಜಾಟದ ನಡುವೆ ಪತ್ರಕರ್ತರು ಕೆಲಸ ನಿರ್ವಹಿಸುತ್ತಿದ್ದು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕ್ರೀಡೆ ಉತ್ತಮ ಬಾಂಧವ್ಯ ಹೊಂದಲು ಅವಕಾಶ ಕಲ್ಪಿಸುತ್ತದೆ ಎಂದರಲ್ಲದೆ ಸ್ಪರ್ಧೆಯಲ್ಲಿ ಕ್ರಿಯಾಶೀಲತೆ ಬೆಳೆಸಿಕೊಳ್ಳಲು ಸಾಧ್ಯ ಎಂದರು.
ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭೋಜಣ್ಣ ರೆಡ್ಡಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಉದ್ಯಮಿ ಮೋಹನ್ಕುಮಾರ್, ವಚನ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೆ.ಎಸ್. ಮೂರ್ತಿ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯೆ ಸುಚಿತ್ರಾ ಪಾಲ್ಗೊಂಡು ಮಾತನಾಡಿದರು.
ಕ್ರಿಕೆಟ್ ಪಂದ್ಯಾಟದಲ್ಲಿ ಕೊಡಗು ಜಿಲ್ಲೆಯ ಮೀಡಿಯಾ ಇಲೆವೆನ್, ಸೌತ್ ಟೈಗರ್ಸ್, ಟೀಮ್ ಕೋಬ್ರಾ ಮತ್ತು ಅತಿಥೇಯ ತಂಡ ಎಸ್ಎಂಎಸ್ ಮೀಡಿಯಾ ತಂಡ ಪಾಲ್ಗೊಂಡಿದ್ದು ಆತಿಥೇಯ ಎಸ್ಎಂಎಸ್ ಮೀಡಿಯಾ ಫ್ರೆಂಡ್ಸ್ ಪ್ರಥಮ ಸ್ಥಾನ ಗಳಿಸಿತು. ಮೀಡಿಯಾ ಇಲೆವೆನ್ ದ್ವಿತೀಯ ಹಾಗೂ ಸೌತ್ ಟೈಗರ್ಸ್ ತಂಡ ತೃತೀಯ ಸ್ಥಾನ ಗಳಿಸಿತು.