ನಾಪೆÉÇೀಕ್ಲು, ಜ. 1: ಗ್ರಾಮಸ್ಥರಲ್ಲಿ ಒಗ್ಗಟ್ಟು ಇದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಫೆÇೀರ್ಟ್ ಮರ್ಕರ ಹೊಟೇಲ್ ಮಾಲೀಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಕರೆ ನೀಡಿದರು.

ವೆಸ್ಟ್ ಕೊಳಕೇರಿ ಭಗವತಿ ಗ್ರಾಮಾಭಿವೃದ್ಧಿ ಸಂಘ ಮತ್ತು ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಕ್ರೀಡೆಯ ತವರೂರು. ಇಲ್ಲಿನ ಕ್ರೀಡಾ ಪಟುಗಳು ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಕ್ರೀಡಾಕೂಟಗಳನ್ನು ನಡೆಸುವದರಿಂದ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ಮೂಡಿಸಿದಂತಾಗುತ್ತದೆ ಎಂದರು.

ಕಲಿಯಂಡ ಬಿ. ಕಾಳಪ್ಪ ಮಾತನಾಡಿ, ಯುವ ಜನತೆ ಗುರು ಹಿರಿಯರಿಗೆ ಗೌರವ ನೀಡಬೇಕು. ಆಚಾರ-ವಿಚಾರಗಳ ಬಗ್ಗೆ ಆಸಕ್ತಿ ವಹಿಸಬೇಕು. ನಮ್ಮ ಗ್ರಾಮ, ಭಾಷೆ, ಜಲ, ನೆಲಗಳ ಬಗ್ಗೆ ಅಭಿಮಾನ ಹೊಂದಿರಬೇಕು. ಆಗ ಮಾತ್ರ ನಮ್ಮ ಸಂಸ್ಕøತಿ ಉಳಿಯಲು ಸಾಧ್ಯ ಎಂದರು.

ಈ ಸಂದರ್ಭ ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, ಕಪ್ಪೆ ಓಟ, ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಾರ್ವಜನಿಕರಿಗೆ ಭಾರದ ಕಲ್ಲು ಎಸೆತ, ತೆಂಗಿನ ಕಾಯಿಗೆ ಗುಂಡು ಹೊಡೆಯುವದು, ಪಾಸಿಂಗ್ ಬಾಲ್, ಕಣ್ಣಕಟ್ಟಿ ಮಡಿಕೆ ಹೊಡೆಯುವದು, ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ವಹಿಸಿದ್ದರು. ವೇದಿಕೆಯಲ್ಲಿ ಯುವಕ ಸಂಘದ ಅಧ್ಯಕ್ಷ ಕೇಟೋಳಿರ ಅಪ್ಪಚ್ಚ, ಮಾಜಿ ಅಧ್ಯಕ್ಷ ಕಾಂಡಂಡ ಸುಬ್ಬಯ್ಯ, ಕುಂಡ್ಯೋಳಂಡ ವಿಶು ಪೂವಯ್ಯ, ರಮೇಶ್ ಮುದ್ದಯ್ಯ, ಸಂಪತ್ ದೇವಯ್ಯ, ಮತ್ತಿತರರು ಇದ್ದರು.