ಸೋಮವಾರಪೇಟೆ, ಜ.1: ತಾ. 9ರಂದು ಜಿಲ್ಲೆಯಲ್ಲಿ ನಡೆಯುವ ಸಾಧನಾ ಸಮಾವೇಶ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ, ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಲು ತಾ. 4ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.