ನಾಪೆÇೀಕ್ಲು, ಜ. 1 : ಸತತ ಪರಿಶ್ರಮ ಮತ್ತು ಕಠಿಣ ಅಭ್ಯಾಸದಿಂದ ಮಾತ್ರ ಜೀವನದಲ್ಲಿ ಗೆಲುವು ಸಾಧ್ಯ ಎಂದು ನಾಪೆÇೀಕ್ಲು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಾಂಸ್ಕøತಿಕ ಮತ್ತು ಕ್ರೀಡಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳೊಂದಿಗೆ ಓದಿನ ಕಡೆಗೂ ಹೆಚ್ಚಿನ ಮಹತ್ವ ನೀಡಬೇಕು. ಎಸ್.ಎಸ್.ಎಲ್.ಸಿ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಮುಂದಿನ ಎರಡು ತಿಂಗಳಿನಲ್ಲಿ ಮುಖ್ಯ ಪರೀಕ್ಷೆಗಳು ಸಮೀಪಿಸುತ್ತಿದ್ದು, ಎಲ್ಲರೂ ಪರೀಕ್ಷೆ ತಯಾರಿ ಮಾಡಿಕೊಳ್ಳಬೇಕು ಎಂದರು.

ನಿವೃತ್ತ ಉಪನ್ಯಾಸಕ ಸಬಲಮ್ ಬೋಜಣ್ಣ ರೆಡ್ಡಿ ಮಾತನಾಡಿ ಶಿಕ್ಷಕರ ಮಹತ್ವವನ್ನು ವಿದ್ಯಾರ್ಥಿಗಳು ಮೊದಲು ಅರಿಯಬೇಕು. ಪೆÇೀಷಕರಿಗೆ ಹಿರಿಯರಿಗೆ ಗೌರವ ನೀಡಬೇಕು. ಸಮಾಜಕ್ಕೆ ಮಾದರಿಯಾಗುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಅಪ್ಪಚೆಟ್ಟೋಳಂಡ ಮಿಟ್ಟು ಈರಪ್ಪ, ನಿವೃತ್ತ ಶಿಕ್ಷಕ ಕುಲ್ಲೇಟಿರ ಗುರುವಪ್ಪ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎ.ಹಸೈನಾರ್ ವಹಿಸಿದ್ದರು.

ವೇದಿಕೆಯಲ್ಲಿ ಕಾಫಿ ಬೆಳೆಗಾರರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಎನ್.ಎಸ್.ಉದಯ ಶಂಕರ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಗೆ 54 ಎಕರೆ ಜಾಗವನ್ನು ದಾನವಾಗಿ ನೀಡಿದ ಬೊಳ್ಳೆಪಂಡ, ಚೋಕಿರ, ಕೀಕಂಡ, ಪೆÇರವಡ ಮತ್ತು ಮಕ್ಕಿ ಬ್ರಾಹ್ಮಣರ ಕುಟುಂಬದ ಹಿರಿಯರನ್ನು ಸನ್ಮಾನಿಸಿ, ಅವರ ಕೊಡುಗೆಯನ್ನು ಸ್ಮರಿಸಲಾಯಿತು.

ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಉಪಪ್ರಾಂಶುಪಾಲೆ ಪಿ.ಕೆ.ನಳಿನಿ ಸ್ವಾಗತ, ಶಿಕ್ಷಕಿ ಉಷಾ ರಾಣಿ ಸಾಂಸ್ಕøತಿಕ ವರದಿ ಮತ್ತು ದೈಹಿಕ ಶಿಕ್ಷಕಿ ಕಸ್ತೂರಿ ಕ್ರೀಡಾ ವರದಿ ವಾಚಿಸಿದರು. ಶಿಕ್ಷಕಿ ಗಂಗಮ್ಮ ಸ್ಥಳದಾನಿಗಳನ್ನು ಪರಿಚಯಿಸಿ ಶಿಕ್ಷಕ ಮಹಂತೇಶ್ ಕೋಠಿ ನಿರೂಪಿಸಿ, ಶಿಕ್ಷಕ ಸದಾನಂದ ವಂದಿಸಿದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಂದ ಗೌರವ ರಕ್ಷೆ, ವಸ್ತು ಪ್ರದರ್ಶನ, ಸಾಮೂಹಿಕ ಕವಾಯತ್, ಉಮ್ಮತ್ತಾಟ್, ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.