Àುಶಾಲನಗರ, ಜ. 1: ಸರಕಾರ ದಿಂದ ದೊರಕುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಹಿಂದ ಒಕ್ಕೂಟ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒಕ್ಕೂಟದ ಮಾಜಿ ಜಿಲ್ಲಾ ಅಧ್ಯಕ್ಷರು ಹಾಗೂ ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಹೇಳಿದರು.
ಪಟ್ಟಣದ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಒಕ್ಕೂಟದ ಕುಶಾಲನಗರ ಹೋಬಳಿ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಕ್ಕೂಟ ಯಾವದೇ ಪಕ್ಷ ಹಾಗೂ ರಾಜಕೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸದೆ ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಅರ್ಹ ಫಲಾನುಭವಿಗಳು ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕಿದೆ. ಒಗ್ಗಟ್ಟಿನ ಮೂಲಕ ಯಾವದೇ ರೀತಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೂಡ ಒಗ್ಗೂಡಿ ಕಾರ್ಯನಿರ್ವಹಿಸಿ ಒಕ್ಕೂಟದ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.
ಜಿಲ್ಲಾ ಕಾರ್ಯಕಾರಿ ಸಮಿತಿ ರಚಿಸಿ ಸೋಮವಾರಪೇಟೆ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದ ಸಮಾವೇಶ ಕೈಗೊಳ್ಳಲು ಚಿಂತನೆ ಹರಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಮುದ್ದಯ್ಯ, ಹೋಬಳಿ ಅಧ್ಯಕ್ಷ ಎಂ.ಕೆ.ಹಮೀದ್, ಉಪಾಧ್ಯಕ್ಷೆ ರಾಧಾ ಪುಟ್ಟರಾಜು, ಕಾರ್ಯದರ್ಶಿ ಅಬ್ದುಲ್ ಅಜೀಜ್ ಇದ್ದರು.