ಮಡಿಕೇರಿ, ಜ. 1: ಪ್ರಸಕ್ತ ಸಾಲಿನಲ್ಲಿ ನಡೆದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ಜನವರಿ 1, 2017 ರಿಂದ ಡಿಸೆಂಬರ್ 31, 2017 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು, ಅಥವಾ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ, ಸ್ಕೂಲ್ ಗೇಮ್ಸ್ ಫೆಡೆರೇಷನ್ ಹಾಗೂ ಅಂಗೀಕೃತ ಕ್ರೀಡಾ ಫೆಡರೇಷನ್ ವತಿಯಿಂದ 2017ನೇ ಸಾಲಿನಲ್ಲಿ ಏರ್ಪಡಿಸಿರುವ ರಾಜ್ಯ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದ ಅಥವಾ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅರ್ಹ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುವದು. ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಜನವರಿ 8, ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ 08272-228985 ಸಂಪರ್ಕಿಸಬಹುದು.