ಕುಶಾಲನಗರ, ಜ. 2: ವಿವಾಹಿತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಕುಶಾಲನಗರದಲ್ಲಿ ನಡೆದಿದೆ. ಸ್ಥಳೀಯ ಸಿಂಗಾರಮ್ಮ ಬಡಾವಣೆ ನಿವಾಸಿ ಕೂಲಿ ಕಾರ್ಮಿಕ ಶ್ರೀನಿವಾಸ (32) ಎಂಬಾತ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.