ಸೋಮವಾರಪೇಟೆ, ಜ. 2: ವಿಜಯಪುರದ ದಾನಮ್ಮ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ, ಸಚಿವ ಅನಂತ್‍ಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ಸೇರಿದಂತೆ ಇನ್ನಿತರ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ತಾ. 6ರಂದು ಮಡಿಕೇರಿಯಲ್ಲಿ ಸಮಾನ ಮನಸ್ಕರ ಒಕ್ಕೂಟ ನಡೆಸುವ ಪ್ರತಿಭಟನೆಗೆ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪ. ವರ್ಗ ನಿವೃತ್ತ ನೌಕರರ ಸಂಘ ಬೆಂಬಲ ನೀಡಲಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗೋಷ್ಠಿಯಲ್ಲಿ ಸಂಘದ ಸದಸ್ಯರಾದ ನರಸಯ್ಯ, ಜಯಪ್ಪ ಹಾನಗಲ್ ಉಪಸ್ಥಿತರಿದ್ದರು.