ಕೂಡಿಗೆ, ಜ. 2: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದ್ಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಕ್ಕಳ ಸಂತೆ ನಡೆಯಿತು.
ಉದ್ಘಾಟನೆಯನ್ನು ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಲೀಲಾ ನೆರವೇರಿಸಿದರು. ಈ ಸಂದರ್ಭ ಉಪಾಧ್ಯಕ್ಷ ಗಿರೀಶ್, ಸದಸ್ಯೆ ಕಲ್ಪನಾ, ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಇದ್ದರು.