ಕುಶಾಲನಗರ, ಜ. 2: ಇಲ್ಲಿನ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ 2017-18ನೇ ಸಾಲಿನ ವಾರ್ಷಿಕೋತ್ಸವ ಕಾಲೇಜು ಆವರಣದಲ್ಲಿ ನಡೆಯಿತು.

ಪ್ರಧಾನ್ ಗೌಥಮ್ ವಿದ್ಯಾ ಟ್ರಸ್ಟ್ ಅಧ್ಯಕ್ಷ ಆರ್.ಕೆ. ರಾಮಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್ ಉದ್ಘಾಟಿಸಿದರು. ಕುಶಾಲನಗರ ಪಟ್ಟಣ ಪಂಚಾಯಿತಿ ಸದಸ್ಯ ಡಿ.ಕೆ. ತಿಮ್ಮಪ್ಪ, ಟ್ರಸ್ಟ್ ಕಾರ್ಯದರ್ಶಿ ಬಿ. ರಾಮಕೃಷ್ಣ, ಕಾಲೇಜು ಪ್ರಾಂಶುಪಾಲ ಎಸ್.ಟಿ. ಪುರುಷೋತ್ತಮ್, ಉಪನ್ಯಾಸಕರಾದ ಕೆ.ಕೆ. ಗಣಪತಿ, ಅಶ್ವಿನಿ ಕುಮಾರ್ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಬಹುಮಾನ ವಿತರಣೆ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಉಪನ್ಯಾಸಕ ಹೆಚ್.ಟಿ. ಪುಟ್ಟರಾಜು ಸ್ವಾಗತಿಸಿದರು, ರಕ್ಷಿತಾ ಪ್ರಾರ್ಥಿಸಿದರು, ರಶ್ಮಿ ಮತ್ತು ಜೋವಿನ್ ನಿರೂಪಿಸಿದರು.