*ಗೋಣಿಕೊಪ್ಪಲು, ನ. 2 : ಸರ್ಕಾರದ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರದಲ್ಲಿ ಕೇಂದ್ರದ ಅನುದಾನವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸುತ್ತಿಲ್ಲ ಎಂದು ಶಾಸಕ ಕೆ.ಜಿ. ಬೋಪಯ್ಯ ಆರೋಪಿಸಿದರು.ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರವು ಕೇವಲ ಜಾಹೀರಾತುಗಳ ಮೂಲಕ ಪ್ರಚಾರ ಗಿಟ್ಟಿಕೊಂಡು ಸರ್ಕಾರದ ಹಣವನ್ನು ಪೋಲು ಮಾಡುತ್ತಿದೆ.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಹದಗೆಟ್ಟಿವೆ ಯಾವದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಚುನಾವಣೆ ಹತ್ತಿರ ಬರುತ್ತಿರುವದರಿಂದ ಹಲವು ಕಡೆಗಳಲ್ಲಿ ಭೂಮಿ ಪೂಜೆ ಮಾಡುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಕೇಂದ್ರ ಸರ್ಕಾರದಿಂದ ಬರುವ ಹಣವನ್ನು ಸಮರ್ಪಕವಾಗಿ ಉಪ ಯೋಗಿಸುತ್ತಿಲ್ಲ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್ ಮಾತನಾಡಿ, ಕಾಂಗ್ರೆಸ್ ಜಾತಿ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನ ನಡೆಸುತ್ತಿದೆ. ಅಭಿವೃದ್ಧಿ ಕಾರ್ಯಗಳಿಂದ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ನಡೆದ ಚುನಾವಣೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.
(ಮೊದಲ ಪುಟದಿಂದ) ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಪಾಲಿಗೆ ಕರಾಳ ದಿನಗಳನ್ನು ತೋರಿಸಿವೆ. ಜನಪರ ಕಾರ್ಯಗಳಿಂದ ಇಂದು ದೇಶದ ಹಲವು ರಾಜ್ಯಗಳಲ್ಲಿ ಬಿ.ಜೆ.ಪಿ. ಜಯ ಸಾಧಿಸಲು ಸಾಧ್ಯವಾಗಿದೆ ಎಂದು ಬಿ.ಜೆ.ಪಿ. ತಾಲೂಕು ಮಂಡಲ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಹೇಳಿದರು.
ಕೊಡಗಿಗೆ ಮಲತಾಯಿ ಧೋರಣೆ ತೋರುತ್ತಿರುವ ಸರಕಾರದ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಜನರ ವಿರೋಧದ ನಡುವೆಯೂ ಪ್ರಾಣಹಾನಿ ಸಂಭವಿಸಿದರೂ ಟಿಪ್ಪು ಜಯಂತಿ ಆಚರಿಸುವ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಕೊಡಗಿಗೆ ಅವಮಾನ ಮಾಡಿದ ಸರಕಾರವನ್ನು ನಿರ್ಲಕ್ಷಿಸಬೇಕಾಗಿದೆ ಎಂದು ಹೇಳಿದರು.
ರಾಜ್ಯ ಬಿ.ಜೆ.ಪಿ. ಕಾರ್ಯದರ್ಶಿ ಮನು ಮುತ್ತಪ್ಪ ಮಾತನಾಡಿ, ದೇಶದಲ್ಲಿ ಬಿ.ಜೆ.ಪಿ. ಅಲೆ ಎದ್ದಿದೆ. ಈಗಾಗಲೇ ಸುಮಾರು 58 ಲಕ್ಷ ಸದಸ್ಯತ್ವ ಅಭಿಯಾನ ನಡೆದಿದೆ. ಜಿಲ್ಲೆಯಲ್ಲಿ 46 ಸಾವಿರ ಸದಸ್ಯತ್ವ ಅಭಿಯಾನ ನಡೆದಿದೆ. ಬಿ.ಜೆ.ಪಿ.ಯ ಮುಂದಿನ ಗುರಿ ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿಪಡಿಸುವದಾಗಿದೆ ಎಂದು ಹೇಳಿದರು.
ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ, ಜಿಲ್ಲಾ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ವರ್ತಕ ಪ್ರಕೋಷ್ಠ ಅಧ್ಯಕ್ಷ ಗಿರೀಶ್ ಗಣಪತಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ರೀನಾ ಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಕಳಗಿ, ರಾಬಿನ್ ದೇವಯ್ಯ, ಎಂ.ಬಿ. ದೇವಯ್ಯ, ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸುವಿನ್ ಗಣಪತಿ, ಬಾಂಡ್ ಗಣಪತಿ, ಲಾಲಾ ಭೀಮಯ್ಯ, ಜಿ.ಪಂ. ಸದಸ್ಯರುಗಳಾದ ಅಚ್ಚಪಂಡ ಮಹೇಶ್ ಗಣಪತಿ, ಶಶಿ ಸುಬ್ರಮಣಿ, ವಿಜು ಸುಬ್ರಮಣಿ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷೆ ಕಾಂತಿ ಸತೀಶ್, ತಾಲೂಕು ಬಿ.ಜೆ.ಪಿ. ಯುವ ಮೋರ್ಚ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ, ಮಹಿಳಾ ಮೋರ್ಚ ಅಧ್ಯಕ್ಷೆ ಸುಮಿ ಸುಬ್ಬಯ್ಯ, ಆರ್.ಎಂ.ಸಿ. ಉಪಾಧ್ಯಕ್ಷ ಕಳ್ಳಂಗಡ ಬಾಲಕೃಷ್ಣ, ತಾಲೂಕು ಮಹಿಳಾ ಮೋರ್ಚ ಉಪಾಧ್ಯಕ್ಷೆ ರಾಣಿ ನಾರಾಯಣ, ಕೊಣಿಯಂಡ ಬೋಜಮ್ಮ, ರತಿ ಅಚ್ಚಪ್ಪ, ತೀತಿರ ಊರ್ಮಿಳಾ, ಸೀತಮ್ಮ, ಸೆಲ್ವಿ, ಮನೆಯಪಂಡ ದೇಚಮ್ಮ ಸೇರಿದಂತೆ ಸ್ಥಾನೀಯ ಸಮಿತಿ ಅಧ್ಯಕ್ಷರು, ಬೂತ್ ಮಟ್ಟದ ಅಧ್ಯಕ್ಷರುಗಳು, ತಾ.ಪಂ. ಸದಸ್ಯರುಗಳು ಹಾಜರಿದ್ದರು.