ಮಡಿಕೇರಿ, ಜ. 2: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ತಾ. 4 ರಂದು (ನಾಳೆ) ಜಿಲ್ಲೆಗೆ ಆಗಮಿಸಲಿದ್ದಾರೆ.

ಕುಶಾಲನಗರ ಬಸವನಹಳ್ಳಿಯ ಹೆಲಿಪ್ಯಾಡ್‍ಗೆ ಬಂದಿಳಿಯಲಿರುವ ಕುಮಾರಸ್ವಾಮಿ ಅಲ್ಲಿಗೆ ಸಮೀಪದ ಖಾಸಗಿ ರೆಸಾರ್ಟ್‍ವೊಂದರಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಉಸ್ತುವಾರಿ ವಹಿಸಿರುವ ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ಮೂಡಿಗೆರೆ ಮತ್ತು ಮಡಿಕೇರಿ-ವೀರಾಜಪೇಟೆ ಕ್ಷೇತ್ರದ ಜೆಡಿಎಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.