ಮಡಿಕೇರಿ, ಜ. 2: ವೀರನಾಡು ರಕ್ಷಣಾ ವೇದಿಕೆಯಿಂದ ನಗರದ ಹಿಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಯಿತು.

ನಗರದ ಬಹುತೇಕ ರಸ್ತೆಗಳು ಹೊಂಡ ಗುಂಡಿಗಳಾಗಿ ಪಾದಚಾರಿಗಳಿಗೆ ಮತ್ತು ವಾಹನಗಳಿಗೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದಷ್ಟು ಮಟ್ಟಿಗೆ ಹಾನಿಯಾಗಿದೆ. ಹಲವಾರು ಬಾರಿ ನಗರಸಭೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ವೇದಿಕೆಯ ಅಧ್ಯಕ್ಷ ಹರೀಶ್ ಆಚಾರ್ಯ ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಗರಸಭಾ ಆಯುಕ್ತೆ ಶುಭಾ ಅವರು ರಸ್ತೆ ದುರಸ್ತಿಗೆ ಶೀಘ್ರ ಕ್ರಮಕೈಗೊಳ್ಳು ವದಾಗಿ ಭರವಸೆ ನೀಡಿದರು.