ಮಡಿಕೇರಿ, ಜ. 3: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ 53ನೇ ಎ.ಡಿ. ಶ್ರೋಫ್ ಅವರ ಜ್ಞಾಪಕಾರ್ಥ ಅಂತರ ಕಾಲೇಜು ಭಾಷಣ ಸ್ಪರ್ಧೆಯು ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಇತ್ತೀಚೆಗೆ ನಡೆಯಿತು.
ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ನಡುವೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಫೀಲ್ಡ್ ಮಾರ್ಷಲ್ ಎಂ.ಕೆ. ಕಾರ್ಯಪ್ಪ ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿನಿಯಾದ ವರ್ಷ ಟಿ.ಆರ್, ಕೊಡ್ಲಿಪೇಟೆಯ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಗಾನವಿ ಜಿ.ಎನ್. ಹಾಗೂ ವೀರಾಜಪೇಟೆಯ ಕಾವೇರಿ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ತಪ್ಸೀನ ಪಿ.ವಿ. ತೃತೀಯ ಬಹುಮಾನವನ್ನು ಪಡೆದುಕೊಂಡರು.
ಮಡಿಕೇರಿ ವಕೀಲ ಸಂಘದ ಉಪಾಧ್ಯಕ್ಷ ಕೆ.ಡಿ. ದಯಾನಂದ, ಫೀಲ್ಡ್ ಮಾರ್ಷಲ್ ಎಂ.ಕೆ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಎ.ಎ. ಪಾರ್ವತಿ, ಕಾಲೇಜಿನ ಸ್ನಾತಕ್ಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಡಾ. ಟಿ.ಡಿ. ತಿಮ್ಮಯ್ಯ, ಪದವಿ ವಿಭಾಗದ ಮುಖ್ಯಸ್ಥ ತಿಪ್ಪೇಸ್ವಾಮಿ ಇತರರು ಪಾಲ್ಗೊಂಡಿದ್ದರು.