ಮಡಿಕೇರಿ ಜ. 3 : ನಾನಾ ಇಲಾಖೆಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಆರ್ಥಿಕ ಪ್ರಗತಿಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಆಗಿರುವ ಕಾಮಗಾರಿಗಳ ಆರ್ಥಿಕ ಪ್ರಗತಿಯನ್ನು ಫೆಬ್ರವರಿ ಅಂತ್ಯದೊಳಗೆ ಸಾಧಿಸಬೇಕು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.
ಸ್ವಚ್ಛ ಭಾರತ ಯೋಜನೆಯ ಪ್ರಗತಿಯು ಕುಂಠಿತಗೊಂಡಿರುವದಕ್ಕೆ ಜಿ.ಪಂ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಯೋಜನೆಯ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಮಾಡಬೇಕಾದ ಕಾರ್ಯಕ್ರಮಗಳ ಬಗ್ಗೆ ಕಾರ್ಯ ಪ್ರವೃತ್ತರಾಗುವಂತೆ ಜಿ.ಪಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇರುವ ಕಡೆ ತುರ್ತಾಗಿ ಜಾಗವನ್ನು ಗುರುತಿಸಿಕೊಡುವಂತೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿಯಲ್ಲಿ ಬಾಕಿ ಇರುವ ಕೊಳವೆ ಬಾವಿಯನ್ನು ಪೂರ್ಣಗೊಳಿಸಿ ಎಂದು ಸೂಚನೆ ನೀಡಿದರು.
ಐ.ಟಿ.ಡಿ.ಪಿ. ಇಲಾಖೆ ಅಧಿಕಾರಿಯವರಿಂದ ಮಾಹಿತಿ ಪಡೆದು ಯಡವನಾಡಿನಲ್ಲಿ ಜನರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದ ಆದೇಶವನ್ನು ಪಾಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ ಕುಡಿಯುವ ನೀರಿಗೆ ಬಿಡುಗಡೆಯಾಗಿರುವ ಹಣವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣ ಗೊಳಿಸಿ, ಹಾಗೆಯೇ ನಮ್ಮ ಗ್ರಾಮ ನಮ್ಮ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿ ದಂತೆ ರೂ. 80 ಕೋಟಿ ಹಣ ಬಿಡುಗಡೆಯಾಗಿದ್ದು ಬಾಕಿ ಇರುವ ಕೆಲಸವನ್ನು ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್ ನಾಲ್ಕು ಕಡೆಗಳಲ್ಲಿ ಅಂಬೇಡ್ಕರ್ ಭವನ ಮತ್ತು ಜಗಜೀವನ್ ರಾಮ್ ಭವನಕ್ಕೆ ಭೂಮಿಯ ಪರಿಶೀಲನೆ ಮಾಡ ಲಾಗಿದ್ದು, ಕೆಲಸವನ್ನು ಪೂರ್ಣ ಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ , ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಉಪ ವಿಭಾಗಾಧಿ ಕಾರಿ ಡಾ. ನಂಜುಂಡೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಹಿಂದುಳಿದ ವರ್ಗಗಳ ಮತ್ತು ಕಲ್ಯಾಣ ಇಲಾಖೆಯ ಉಪ ನಿರ್ದೇಶಕÀ ಕೆ.ವಿ.ಸುರೇಶ್, ಐಟಿಡಿಪಿ ಅಧಿಕಾರಿ ಪ್ರಕಾಶ್, ಇಲಾಖೆಯ ಅಧಿಕಾರಿಗಳು ಇದ್ದರು.