ಶನಿವಾರಸಂತೆ, ಜ. 3: ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ತಾ. 4 ರಿಂದ (ಇಂದಿನಿಂದ) ತಾ. 10ರ ವರೆಗೆ ಹಾರೆಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಮನೆಹಳ್ಳಿ ಮಠದ ತಪೋವನ ಕ್ಷೇತ್ರದ ಮಹಾಂತಶಿವಲಿಂಗ ಮಹಾಸ್ವಾಮಿ ಶಿಬಿರವನ್ನು ಉದ್ಘಾಟಿಸುವರು. ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಹೆಚ್.ಪಿ. ಶೇಷಾದ್ರಿ, ಕಾರ್ಯದರ್ಶಿ ಜಗನ್ ಪಾಲ್, ಪ್ರಾಂಶುಪಾಲ ಎಸ್.ಎಂ. ಉಮಾಶಂಕರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಮಾಜಿ ಸದಸ್ಯ ಡಿ.ಬಿ. ಧರ್ಮಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಲೀಲಾವತಿ, ಸುರೇಶ್, ಮೀನಾಕ್ಷಿ, ಎಸ್.ಎಂ. ಮೋಹನ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.