ಭಾಗಮಂಡಲ, ಜ.3: ಸಂಸಾರಿಕ ಕಲಹದಿಂದ ಜಿಗುಪ್ಸೆಗೊಂಡಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಭಾಗಮಂಡಲದಲ್ಲಿ ನಿನ್ನೆ ಸಂಭವಿಸಿದೆ. ಅಲ್ಲಿನ ನಿವಾಸಿ ಕೂಡಕಂಡಿ ಶಿವಪ್ರಸಾದ್ ಪತ್ನಿ ಮಮತ (30) ಎಂಬಾಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರೂ, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ಪತಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಮೃತ ಮಹಿಳೆ ಏಳು ವರ್ಷದ ಓರ್ವ ಪುತ್ರ ಹಾಗೂ 4 ವರ್ಷದ ಪುತ್ರಿಯನ್ನು ಅಗಲಿದ್ದಾರೆ.