ಸುಂಟಿಕೊಪ್ಪ, ಜ. 4: ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಹೊಸ ವರ್ಷಾಚರಣೆ ಅಂಗವಾಗಿ ಧರ್ಮಸ್ಥಳ ಸಂಘದ ವತಿಯಿಂದ ಡೈರಿಯನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಭಟ್ ಹೊಸ ವರ್ಷದ ಡೈರಿ ಬಿಡುಗಡೆಗೊಳಿಸಿದರು. ಹೊಸ ವರ್ಷದ ಅಂಗವಾಗಿ ಕೇಕ್ ಕತ್ತರಿಸುವ ಮೂಲಕ ನೆರೆದಿದ್ದ ಸೇವಾ ಪ್ರತಿನಿಧಿಗಳಿಗೆ ಸಿಹಿ ಹಂಚಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕಿ ಸರಸ್ವತಿ ಸುಂಟಿಕೊಪ್ಪ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ. ವಿನ್ಸೆಂಟ್ ವಿವಿಧ ಕಾರ್ಯಕ್ಷೇತ್ರಗಳ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.