ಮಡಿಕೇರಿ, ಜ. 4: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ತಾ. 5 ರಂದು (ಇಂದು) ಮಡಿಕೇರಿಯಲ್ಲಿ ತಾಲೂಕು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಾಗಾರ -2018 ಆಯೋಜಿಸಲಾಗಿದೆ.

ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಚಾಲನೆ ನೀಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹೆಚ್.ಜಿ. ಭಾಗ್ಯ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಅನಿಲ್ ಹೆಚ್.ಟಿ., ಕಾರ್ಯದರ್ಶಿ ಪಿ.ಎಂ. ಸಂದೀಪ್, ಅಸಿಸ್ಟೆಂಟ್ ಗವರ್ನರ್ ಮಹೇಶ್ ನಲ್ವಾಡೆ, ಜೋನಲ್ ಲೆಫ್ಟಿನೆಂಟ್ ಎ.ಕೆ. ವಿನೋದ್, ಸಂತ ಜೋಸೆಫರ ಕಾನ್ವೆಂಟ್ ಮುಖ್ಯೋಪಾಧ್ಯಾಯಿನಿ ರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಪಾಲ್ಗೊಳ್ಳಲಿದ್ದಾರೆ.

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ರೀತಿ, ವೃತ್ತಿ ಮಾರ್ಗದರ್ಶನ, ಆರೋಗ್ಯ ಸಂರಕ್ಷಣೆ ಸೇರಿದಂತೆ ಉಪಯುಕ್ತ ಮಾಹಿತಿಗಳನ್ನು ಹೆಸರಾಂತ ವ್ಯಕ್ತಿತ್ವ ವಿಕಸನ ತರಬೇತುದಾರ ಮೈಸೂರಿನ ಚೇತನ್ ರಾಮ್ ನೀಡಲಿದ್ದು, ಮಡಿಕೇರಿಯ ಖ್ಯಾತ ಮನಶಾಸ್ತ್ರಜ್ಞ ಡಾ. ರೂಪೇಶ್ ಗೋಪಾಲ್, ನೇತ್ರ ತಜ್ಞ ಡಾ. ಸಿ.ಆರ್. ಪ್ರಶಾಂತ್, ಹಿರಿಯ ಪತ್ರಕರ್ತ ಬಿ.ಜಿ. ಅನಂತಶಯನ ಕೂಡ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.