ಮಡಿಕೇರಿ, ಜ. 6: ಯುವ ಜಾತ್ಯತೀತ ಜನತಾ ದಳದ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರ ಸಭೆ ತಾ. 7 ರಂದು (ಇಂದು) ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಯುವ ಜೆಡಿಎಸ್ನ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 25 ರಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಜಿಲ್ಲೆಗೆ ಆಗಮಿಸಲಿದ್ದು, ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಈ ಸಭೆ ನಡೆಸುತ್ತಿರುವದಾಗಿ ತಿಳಿಸಿದರು. ಇಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಭೆಯಲ್ಲಿ ಯುವ ಜೆಡಿಎಸ್ನ ರಾಜ್ಯ ಕಾರ್ಯಾಧ್ಯಕ್ಷ ಬಿ.ಹೆಚ್. ಚಂದ್ರಶೇಖರ್ ಹಾಗೂ ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷ ವಿ. ನರಸಿಂಹ ಮೂರ್ತಿ, ಮಾಜಿ ಸಚಿವ ಬಿ.ಎ. ಜೀವಿಜಯ, ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ನಗರಾಧ್ಯಕ್ಷ ರವಿ ಕಿರಣ್ ರೈ, ಪ್ರಧಾನ ಕಾರ್ಯದರ್ಶಿ ಅಜಿತ್, ಪ್ರಮುಖರಾದ ಧನಂಜಯ ಶೆಟ್ಟಿ ಹಾಗೂ ಜಾಶಿರ್ ಉಪಸ್ಥಿತರಿದ್ದರು.