ಸಿದ್ದಾಪುರ, ಜ. 6: ಜೆ.ಡಿ.ಎಸ್. ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಹೆಚ್.ವಿ. ಜಯಮ್ಮ ಅವರನ್ನು ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಆಯ್ಕೆಮಾಡಿ ಆದೇಶ ಹೊರಡಿಸಿದ್ದಾರೆ.
ಹೆಚ್.ವಿ. ಜಯಮ್ಮ ಜೆ.ಡಿ.ಎಸ್ ಪಕ್ಷದಲ್ಲಿ ಕಳೆದ 25 ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿದ್ದು, ಇದೀಗ ಅಮ್ಮತ್ತಿ-ಕಾರ್ಮಾಡು ಗ್ರಾ.ಪಂ ಸದಸ್ಯರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.