ಮಡಿಕೇರಿ, ಜ. 6: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 8 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ. ಬಳಿಕ 12.30 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ತಾ. 9 ರಂದು ಬೆಳಿಗ್ಗೆ 11.15 ಗಂಟೆಗೆ ನಗರದ ಹೊರ ವಲಯದ ಗಾಲ್ಫ್ ಮೈದಾನದ ಹೆಲಿಪ್ಯಾಡ್‍ನಲ್ಲಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಳ್ಳಲಿದ್ದಾರೆ.

ನಂತರ 12 ಗಂಟೆಗೆ ನಗರದಲ್ಲಿ ಮುಖ್ಯಮಂತ್ರಿಯವರೊಂದಿಗೆ ಕೊಡಗು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.